HomeGadag Newsಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಬಲ

ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಬಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದರ ಜತೆಗೆ ಮಣ್ಣು–ನೀರು ಸಂರಕ್ಷಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಯೋಜನೆ ಪೂರಕವಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ (ವಿಬಿಜಿ ರಾಮ್‌ಜಿ) ಕುಮಾರ ಪೂಜಾರ ಹೇಳಿದರು.

ಗದಗ ತಾಲೂಕಿನ ಅಂತೂರ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಜನೆಯಡಿ ಕೂಲಿ ಮೊತ್ತವನ್ನು ₹382ಕ್ಕೆ ಹೆಚ್ಚಿಸಲಾಗಿದ್ದು, ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ದಾಖಲಿಸಿ, ಅಳತೆಗೆ ಅನುಗುಣವಾಗಿ ಕೂಲಿ ಪಾವತಿಸಲಾಗುತ್ತದೆ. ಪುರುಷರು ಹಾಗೂ ಮಹಿಳೆಯರಿಗೆ ಯಾವುದೇ ತಾರತಮ್ಯವಿಲ್ಲದೆ ಸಮಾನ ಕೂಲಿ ನೀಡಲಾಗುತ್ತದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಹಾಯಕ ನಿರ್ದೇಶಕ (ಪಂರಾ) ಶಿವಕುಮಾರ ವಾಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ಹಾಗೂ ಅಕುಶಲ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವ ಮೂಲಕ ವಿಬಿಜಿ ರಾಮ್‌ಜಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿದೆ. ಕಾಮಗಾರಿಗಳಲ್ಲಿ ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ಪ್ರತಿದಿನ ಎರಡು ಬಾರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ ಎಂದರು.

ಅಂತೂರ–ಬೆಂತೂರ ಗ್ರಾಮದ ಬೂದೀಶ್ವರ ಸಂಸ್ಥಾನ ಮಠದ ಡಾ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶಗೌಡ ಪಾಟೀಲ, ಕಾರ್ಯದರ್ಶಿ ಶಾಂತಯ್ಯ ಪ್ರಭಯ್ಯನಮಠ, ಟಿಎಇ ಪ್ರದೀಪ್ ನರೇಗಲ್ಲ, ಗ್ರಾಪಂ ಸಿಬ್ಬಂದಿ ಮಹಾತೇಶ ಮಜ್ಜಿಗುಡ್ಡ, ಅಶೋಕ ಜಿನಗಿ, ಬಿಎಫ್‌ಟಿ ದಾವಲಸಾಬ್ ಚಳ್ಳಮರದ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img