HomeIndia Newsಮುಂಬೈನಲ್ಲಿ ನಸುಕಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 4-5 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ!

ಮುಂಬೈನಲ್ಲಿ ನಸುಕಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 4-5 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ!

For Dai;y Updates Join Our whatsapp Group

ಮುಂಬೈ: ಮುಂಬೈನ ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೀಕರ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು ಅದರ ಅವಶೇಷಗಳು ಎರಡು-ಮೂರು ಮನೆಗಳ ಮೇಲೆ ಬಿದ್ದಿದ್ದು, ಇನ್ನೂ 4-5 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರ ಬೆಳಗಿನ ಜಾವ ಸುಮಾರು 3:48ಕ್ಕೆ ಘಟನೆ ಸಂಭವಿಸಿದೆ. ಗುಡ್ಡದ ಇಳಿಜಾರಿನ ಭಾಗ ಏಕಾಏಕಿ ಕುಸಿದ ಪರಿಣಾಮ ಭಾರಿ ಪ್ರಮಾಣದ ಮಣ್ಣು ಹಾಗೂ ಅವಶೇಷಗಳು ಮನೆಗಳ ಮೇಲೆ ಬಿದ್ದಿವೆ. ಇದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಭೂಕುಸಿತದ ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ಧಾವಿಸಿವೆ. ಸದ್ಯ ಅವಶೇಷಗಳನ್ನು ತೆರವುಗೊಳಿಸಿ ಅವುಗಳಡಿ ಸಿಲುಕಿರುವವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಡಿಸಿಪಿ ಗಣೇಶ್ ಶಿಂಧೆ ತಿಳಿಸಿದ್ದಾರೆ.

ಭೂಕುಸಿತದಲ್ಲಿ ಗಾಯಗೊಂಡಿರುವ 18 ವರ್ಷದ ಸೋಹೆಲ್ ಅನ್ಸಾರಿ ಹಾಗೂ 14 ವರ್ಷದ ಮೊಹಮ್ಮದ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಹೆಲ್‌ಗೆ ತಲೆಗೆ ಗಾಯವಾಗಿದ್ದು, ಮೊಹಮ್ಮದ್‌ಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರ ಆರೋಗ್ಯ ಸ್ಥಿತಿಯೂ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಹಿನ್ನೆಲೆಯಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img