HomeGadag Newsಯುವಜನರ ಉದ್ಯೋಗ ಸೇತುವೆಗೆ ‘ಜಾಬ್ ಬ್ರಿಡ್ಜ್ ನೋಡ್’

ಯುವಜನರ ಉದ್ಯೋಗ ಸೇತುವೆಗೆ ‘ಜಾಬ್ ಬ್ರಿಡ್ಜ್ ನೋಡ್’

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಯುವಜನರ ಸಬಲೀಕರಣ ಹಾಗೂ ಉದ್ಯೋಗಾವಕಾಶಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ‘ಜಾಬ್ ಬ್ರಿಡ್ಜ್ ನೋಡ್’ ವೆಬ್ ಪೋರ್ಟಲ್‌ಗೆ ಆ.1ರಿಂದ 15ರವರೆಗೆ ಉದ್ಘಾಟನಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮೊಹಮ್ಮದ್ ಯೂಸುಫ್ ಮುಲ್ಲಾ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ವಿದ್ಯಾವಂತ ನಿರುದ್ಯೋಗಿಗಳನ್ನು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಸೂಕ್ತ ಮಾರ್ಗದರ್ಶನದೊಂದಿಗೆ ಸಂಪರ್ಕಿಸುವುದು ಉಪಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.

ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳ ಮಾಹಿತಿ, ಅಗತ್ಯ ಕೌಶಲ್ಯಾಭಿವೃದ್ಧಿ, ತರಬೇತಿ ಹಾಗೂ ಮಾರ್ಗದರ್ಶನವನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಪ್ರಯತ್ನವನ್ನು ‘ಜಾಬ್ ಬ್ರಿಡ್ಜ್ ನೋಡ್’ ಮೂಲಕ ಮಾಡಲಾಗಿದೆ. ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಸಂಪರ್ಕ ಕಲ್ಪಿಸುವ ವೇದಿಕೆಯಾಗಿ ಇದು ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಪೋರ್ಟಲ್‌ನಲ್ಲಿ ವಿವಿಧ ಉದ್ಯೋಗಾವಕಾಶಗಳು, ಕೌಶಲ್ಯಾಭಿವೃದ್ಧಿ, ತರಬೇತಿ ಕಾರ್ಯಕ್ರಮಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾರ್ಗದರ್ಶನದ ಮಾಹಿತಿಯನ್ನು ಪಡೆಯಬಹುದಾಗಿದೆ.

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯ ಘಟಕದ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದ್ದು, 2016ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯುವಜನರ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಾಮಾಜಿಕ ಕಾರ್ಯಕರ್ತರು ಹಾಗೂ ಯುವಜನರಿಗೆ ಉದ್ಯೋಗ ಸಂಬಂಧಿತ ಮಾಹಿತಿ ತಲುಪಿಸುವ ಉದ್ದೇಶದಿಂದ ಈ ಹೊಸ ಉಪಕ್ರಮ ಕೈಗೊಳ್ಳಲಾಗಿದೆ ಎಂದರು.

ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು www.jobbridgenode.com ಮೂಲಕ ಸೇವೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ 6366234200 ಸಂಪರ್ಕಿಸಬಹುದು. jobbridge@solidaritykarnataka.com ಇ-ಮೇಲ್ ಮೂಲಕವೂ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಿಯಾಜ್ ಅಹ್ಮದ್ ಶೇಖ್, ಮೆಹಬೂಬ್ ರೋಣದ, ಜಾವೇದ್ ಉಮಚಗಿ, ಅಕ್ಬರ್ ಅತ್ತಾರ, ಜಹೀರ್ ಅಹ್ಮದ್, ತಾಹೀರ್ ಡಂಬಳ, ಖಾಸೀನ್ ದರ್ಗದ್, ಮುನ್ನಾ ಕಲ್ಮನಿ, ಇಮಾಮ್ ಮೊರಬದ, ಸಾಧಿಕ್ ಧಾರವಾಡ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img