HomePolitics News224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

For Dai;y Updates Join Our whatsapp Group

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಅಭಿವೃದ್ಧಿಗಾಗಿ ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ವಿಧಾನಸಭೆಯಲ್ಲಿ ನೂತನ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶುಕ್ರವಾರ ಮಾತನಾಡಿದ ಅವರು, ಜೂನ್ 3ರಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಚರ್ಚೆ ನಡೆಸಿ, 139 ಶಾಸಕರ ಬೆಂಬಲದೊಂದಿಗೆ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಅನೇಕ ನಾಯಕರು ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ತಾವು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇವೆ. ಈಗಿನ ಸರ್ಕಾರವೂ ಅದರ ಮುಂದುವರಿಕೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಜನರು ನೀಡುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಆದರೆ ಇದೀಗ ತಮಗೆ ಸಿಕ್ಕಿರುವ ಅವಕಾಶದಲ್ಲಿ ವಿಧಾನಸಭೆಯ 224 ಶಾಸಕರೂ ತಮ್ಮ ದೃಷ್ಟಿಯಲ್ಲಿ ಒಂದೇ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ತಮ್ಮ ಆಶಯ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರ ಸಹಕಾರ ಮತ್ತು ವಿಶ್ವಾಸ ಪಡೆದುಕೊಂಡು ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಆಡಳಿತದಲ್ಲಿ ಹಲವು ರಾಜಕೀಯ ಮುತ್ಸದ್ಧಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ಗುಂಡೂರಾವ್, ನಿಜಲಿಂಗಪ್ಪ, ಬಿ.ಡಿ. ಜತ್ತಿ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಚ್.ಡಿ. ದೇವೇಗೌಡ, ಎಸ್.ಎಂ. ಕೃಷ್ಣ, ಧರಂ ಸಿಂಗ್, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ರಾಜ್ಯವನ್ನು ಮುನ್ನಡೆಸಿದ್ದಾರೆ ಎಂದು ಸ್ಮರಿಸಿದರು.

ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ನಾಡಿಗೆ ಕೊಡುಗೆ ನೀಡಿದ್ದಾರೆ. ತಾವು ಯಾರನ್ನೂ ಟೀಕೆ ಮಾಡುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವುದು ತಮ್ಮ ಉದ್ದೇಶ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img