ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಸಾಹಿತ್ಯ, ನೆಲ, ನಾಡು, ನುಡಿ ಹಾಗೂ ಸಂಸ್ಕೃತಿಗೆ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಗದುಗಿನ ಮಾಣಿಕ್ಯ’ ಎಂದೇ ಖ್ಯಾತರಾದ ಶ್ರೀಮತಿ ಡಾ. ಪದ್ಮಾ ಜೆ. ಕಬಾಡಿ ಅವರಿಗೆ ರವೀಂದ್ರನಾಥ ಟ್ಯಾಗೋರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಹಾಗೂ ಶ್ರೀ ವಿವೇಕಾನಂದ ಸಂಸ್ಥೆ (ರಿ), ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ-2026 ಅಂಗವಾಗಿ ಆ.9ರಂದು ಧಾರವಾಡದ ರಂಗಾಯಣದಲ್ಲಿ ಆಯೋಜಿಸಿದ್ದ ‘ಸಿರಿಗನ್ನಡ ಸ್ವಾತಂತ್ರ್ಯ ಸಂಭ್ರಮ’ ಕಾರ್ಯಕ್ರಮದಲ್ಲಿ ಡಾ. ಪದ್ಮಾ ಕಬಾಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಹಿತ್ಯ ಕ್ಷೇತ್ರದ ಜೊತೆಗೆ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಬೆಳವಣಿಗೆಗೆ ಡಾ. ಪದ್ಮಾ ಜೆ. ಕಬಾಡಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.



