HomeKarnataka Newsಹನೂರು ಎನ್‌ಕೌಂಟರ್‌ ಪ್ರಕರಣ: 15 ಲಕ್ಷ ಪರಿಹಾರದ ಭರವಸೆ ಬಳಿಕ ಅಂತ್ಯಗೊಂಡ ಪ್ರತಿಭಟನೆ

ಹನೂರು ಎನ್‌ಕೌಂಟರ್‌ ಪ್ರಕರಣ: 15 ಲಕ್ಷ ಪರಿಹಾರದ ಭರವಸೆ ಬಳಿಕ ಅಂತ್ಯಗೊಂಡ ಪ್ರತಿಭಟನೆ

For Dai;y Updates Join Our whatsapp Group

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣ ಖಂಡಿಸಿ ಹನೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ.
ಮೃತರ ಕುಟುಂಬಗಳಿಗೆ ₹15 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಹೋರಾಟ ಕೈಬಿಟ್ಟಿದ್ದಾರೆ.

ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ಮೃತರ ಕುಟುಂಬಸ್ಥರು, ಚರ್ಚ್ ಫಾದರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಂಧಾನ ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು.

15 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗದ ಭರವಸೆ:

ಸಂಧಾನ ಸಭೆಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಹಾಗೂ ವೈಯಕ್ತಿಕವಾಗಿ ತಲಾ ₹10 ಲಕ್ಷ ನೀಡುವುದಾಗಿ ಶಾಸಕ ಮಂಜುನಾಥ್ ಭರವಸೆ ನೀಡಿದರು. ಇದರೊಂದಿಗೆ ಪ್ರತಿ ಕುಟುಂಬಕ್ಕೂ ಒಟ್ಟು ₹15 ಲಕ್ಷ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.

ಇದಲ್ಲದೆ, ಮೃತರ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸುವುದು, ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ನೋಡಿಕೊಳ್ಳುವುದು ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಎನ್‌ಕೌಂಟರ್‌ನಲ್ಲಿ ಭಾಗಿಯಾಗಿರುವ ಅರಣ್ಯಾಧಿಕಾರಿಗಳ ಅಮಾನತಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಹನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯ ವರ್ಗಾವಣೆಗೆ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಮಂಜುನಾಥ್ ಹೇಳಿದರು.

ಶಾಸಕರ ಭರವಸೆಯ ಬೆನ್ನಲ್ಲೇ ಪ್ರತಿಭಟನಾಕಾರರು ಹೋರಾಟವನ್ನು ಹಿಂಪಡೆದಿದ್ದು, ಹನೂರಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ರಸ್ತೆ ತಡೆ ತೆರವಾಗಿದ್ದು, ವಾಹನ ಸಂಚಾರವೂ ಸುಗಮವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img