ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನ್ಯಾಚುರಲ್ ಸ್ಟಾರ್ ವಿಜಯ ರಾಘವೇಂದ್ರ ದ್ವಿಪಾತ್ರದಲ್ಲಿ ಅಭಿನಯಿಸಿರುವ ‘ರುದ್ರಾಭಿಷೇಕಂ’ ಚಿತ್ರ ಸೆಪ್ಟೆಂಬರ್ ೨೫ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ.
‘ಪಾನ್ ಇಂಡಿಯಾ ಕ್ರಿಯೇಷನ್ಸ್’, ವಿಜಯಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿರುವ ಈ ಚಿತ್ರ ಕನ್ನಡ ಚಿತ್ರರಂಗಕ್ಕೆ ಸಂಸ್ಥೆಯ ಮೊದಲ ಹೆಜ್ಜೆಯಾಗಿದೆ. ವೀರಭದ್ರ ಸ್ವಾಮಿಯ ಜಾನಪದ ಕಥೆಯನ್ನು ಆಧರಿಸಿರುವ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರು ಹಿಂದೆಂದೂ ಕಾಣದ ವಿಭಿನ್ನ ಹಾಗೂ ಶಕ್ತಿಶಾಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಿಶಿಷ್ಟ ವೀರಗಾಸೆ ಪಾತ್ರದಲ್ಲಿ ಮಿಂಚಿದ್ದಾರೆ.
ಸಾಹಸಮಯ ಕಥಾಹಂದರ ಹೊಂದಿರುವ ಚಿತ್ರಕ್ಕೆ ನಾದಬ್ರಹ್ಮ ವಿ. ಮನೋಹರ್ ಸಂಗೀತ ಸಂಯೋಜಿಸಿದ್ದು, ಥ್ರಿಲ್ಲರ್ ಮಂಜು ಅವರ ಸಾಹಸ ದೃಶ್ಯಗಳು ಪ್ರಮುಖ ಆಕರ್ಷಣೆಯಾಗಿವೆ. ದೇವನಹಳ್ಳಿ, ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಹಾಗೂ ಅಘನಾಶಿನಿ ಹಿನ್ನೀರಿನ ಪ್ರದೇಶಗಳಲ್ಲಿ ೫೦ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
ಚಿತ್ರವು ಈಗಾಗಲೇ ಕನ್ನಡ ಕಲಾಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಸೆಪ್ಟೆಂಬರ್ ೨೫ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಕೆ. ವಸಂತ್ಕುಮಾರ್ ತಿಳಿಸಿದ್ದಾರೆ.
ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ‘ಮಿಲ್ಕ್ ಬ್ಯೂಟಿ’ ಪ್ರಿಯಾಂಕಾ ತಿಮ್ಮೇಶ್ ಅಭಿನಯಿಸಿದ್ದಾರೆ. ರಾಜ್ ಬಲವಾಡಿ, ವಸಂತ್ ಕುಮಾರ್, ಮನು, ಬುಲೆಟ್ ವಿನು, ಸಂದೀಪ್, ಸನತ್, ಸೌಂದರ್ಯ, ನವನೀತ್, ಮಮತಾ, ಸ್ವಾತಿ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.
ತಾಂತ್ರಿಕ ವರ್ಗದಲ್ಲಿ ಮುತ್ತುರಾಜ್ ಛಾಯಾಗ್ರಹಣ, ವಿ. ಮನೋಹರ್ ಸಂಗೀತ, ಭಜರಂಗಿ ಮೋಹನ್ ನೃತ್ಯ ಸಂಯೋಜನೆ, ಥ್ರಿಲ್ಲರ್ ಮಂಜು ಸಾಹಸ, ಬಾಬುಖಾನ್ ಕಲಾ ನಿರ್ದೇಶನ, ನೊಣವಿನಕೆರೆ ಕುಮಾರ ಪ್ರಸಾಧನ ಹಾಗೂ ಮುತ್ತುರಾಜ್.ಟಿ ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ನಾಗೇಂದ್ರ, ಡಾ. ಪ್ರಭು ಗಂಜಿಹಾಳ ಹಾಗೂ ಡಾ. ವೀರೇಶ್ ಹಂಡಿಗಿ ಪಿಆರ್ಒ ಆಗಿ ಕಾರ್ಯನಿರ್ವಹಿಸಿದ್ದಾರೆ.
ಕೆ. ವಸಂತ್ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ ಚಿತ್ರದ ಹಾಡುಗಳನ್ನು ರಚಿಸಿ, ತತ್ವಜ್ಞಾನಿ ಪಾತ್ರದಲ್ಲೂ ಅಭಿನಯಿಸಿದ್ದಾರೆ. ಮನು ಮತ್ತು ಧೀರಜ್ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಎನ್. ಜಯರಾಮ್, ಕೆ.ಎನ್. ಮಂಜುನಾಥ್, ಕೆ. ವೆಂಕಟೇಶ್, ಬಿ. ಚಿದಾನಂದ ಮೂರ್ತಿ, ಸುರೇಶ್ ಬಾಬು, ರವಿ, ಅಶ್ವಥನಾರಾಯಣ, ಡಾ. ಎಂ. ಶಿವಕುಮಾರ್ ಹಾಗೂ ಕುಸುಮ ವಸಂತ್ ಕುಮಾರ್ ಚಿತ್ರವನ್ನು ನಿರ್ಮಿಸಿದ್ದಾರೆ.



