HomePolitics Newsಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

For Dai;y Updates Join Our whatsapp Group

ಬೆಂಗಳೂರು:ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕುಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂಬ ತಮಿಳುನಾಡು ಮಾಜಿ ಸಿಎಂ ಪನ್ನೀರ್ಸೆಲ್ವಂ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲಎಂದು ಸ್ಪಷ್ಟಪಡಿಸಿದರು.

ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ, ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕುಎಂದು ಸಿಎಂ ಹೇಳಿದರು.

ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿಕೆ ನೀಡಿರುವ ಬಗ್ಗೆ ಪ್ರಶ್ನಿಸಿದಾಗ, “ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕುಎಂದು ಶಿವಕುಮಾರ್ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img