ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಜಯಂತಿ ಅಂಗವಾಗಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಲಕ್ಕುಂಡಿಯಲ್ಲಿ ಎತ್ತಿನ ಬಂಡಿಗಳೊಂದಿಗೆ ರಾಯಣ್ಣರ ಭಾವಚಿತ್ರದ ಭವ್ಯ ಮೆರವಣಿಗೆ ಸಂಭ್ರಮದಿಂದ ನಡೆಯಿತು.
ಮಾರುತಿ ನಗರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ 15ಕ್ಕೂ ಹೆಚ್ಚು ಎತ್ತಿನ ಬಂಡಿಗಳು ಪಾಲ್ಗೊಂಡಿದ್ದವು. ಬಲೂನ್ ಹಾಗೂ ವಿವಿಧ ಬಣ್ಣಗಳ ಚಿತ್ತಾರಗಳಿಂದ ಅಲಂಕರಿಸಿದ್ದ ಎತ್ತಿನ ಬಂಡಿಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದವು.
ಮೆರವಣಿಗೆಯುದ್ದಕ್ಕೂ ಬಂಡಾರ ಚೆಲ್ಲಿ ಸಂಭ್ರಮಿಸಿದ ಅಭಿಮಾನಿಗಳು, ಸಂಗೊಳ್ಳಿ ರಾಯಣ್ಣರ ಶೌರ್ಯ ಹಾಗೂ ದೇಶಭಕ್ತಿಯನ್ನು ಸ್ಮರಿಸುವ ಘೋಷಣೆಗಳನ್ನು ಮೊಳಗಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ ಹಾಗೂ ಯುವ ಧುರೀಣ ಪ್ರಕಾಶ ಕರಿ ಅವರು ರಾಯಣ್ಣರ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.



