HomeIndia Newsಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 9 ಮಂದಿ ಸಾವು!

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 9 ಮಂದಿ ಸಾವು!

For Dai;y Updates Join Our whatsapp Group

ಕೋಲ್ಕತ್ತಾ: ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತೀವ್ರವಾಗಿ ವ್ಯಾಪಿಸಿದ ಪರಿಣಾಮ ಹೋಟೆಲ್‌ನಲ್ಲಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ:

ಅಗ್ನಿ ಅವಘಡದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬಳಿಕ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತು.

ಹೋಟೆಲ್‌ನೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು. ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ ಎಸಿ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅಗ್ನಿಶಾಮಕ ಇಲಾಖೆಯ ಪ್ರಕಾರ, ಘಟನೆಯಲ್ಲಿ ಮೃತಪಟ್ಟ ಎಲ್ಲಾ 9 ಮಂದಿ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಅವರು ಕೋಲ್ಕತ್ತಾಗೆ ಬಂದಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಹಾಗೂ ಅಗ್ನಿ ಅವಘಡದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಜನನಿಬಿಡ ಪ್ರದೇಶದಲ್ಲೇ ಈ ಭೀಕರ ಅಗ್ನಿ ಅವಘಡ ಸಂಭವಿಸಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img