ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗ್ರಾಮದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ 12 ವರ್ಷಕ್ಕೊಮ್ಮೆ ನಡೆಯುವ ಹರಿಜಾತ್ರಾ ಮಹೋತ್ಸವದ ಅಂಗವಾಗಿ ಆ.20ರಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಗದುಗಿನ ಬ್ರಹ್ಮಮಠದ ಪೂಜ್ಯ ಜ. ಸದಾಶಿವಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸುವರು. ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಉಪಸ್ಥಿತರಿರುವರು.
ಸಾಮಾಜಿಕ ಕಾರ್ಯಕರ್ತ ಮಹೇಶ ದಾಸರ, ಗಣ್ಯ ವ್ಯಾಪಾರಸ್ಥ ಶರಣಪ್ಪ ಸಾಸನೂರ, ಯುವ ಧುರೀಣ ಸಂಗಮೇಶ ಕವಳಿಕಾಯಿ, ಉದ್ಯಮದಾರ ಸಾಗರ ಪವಾರ ಹಾಗೂ ಗಣ್ಯ ವ್ಯಾಪಾರಸ್ಥ ಪಕೀರಸಾ ಬಾಂಡಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರಸಭೆ ಸದಸ್ಯರಾದ ಶ್ವೇತಾ ದಂಡಿನ, ವಿಜಯಲಕ್ಷ್ಮಿ ದಿಂಡೂರ, ಗೂಳಪ್ಪ ಮುಷಿಗೇರಿ, ಪ್ರಕಾಶ ಅಂಗಡಿ, ಚಂದ್ರಶೇಖರ ತಡಸದ ಹಾಗೂ ಜಾತ್ರಾ ಕಮಿಟಿ ಕಾರ್ಯದರ್ಶಿ ಗಂಗಾಧರ ಮೇಲಗಿರಿ ಅತಿಥಿಗಳಾಗಿ ಉಪಸ್ಥಿತರಿರುವರು.
ಸಭೆಯ ಬಳಿಕ ರಾತ್ರಿ 8.30ಕ್ಕೆ ಡೋಣಿಯ ನಿಂಗಪ್ಪ ಗುಡ್ಡದ ಅವರಿಂದ ಡೊಳ್ಳಿನ ಪದ ಹಾಗೂ ರಾಮದುರ್ಗದ ತಂಡದಿಂದ ಜುಗಲಬಂದಿ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದ್ಯಾಮವ್ವ–ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.



