HomeGadag Newsಗದಗ ಉತ್ಸವಕ್ಕೆ ತೆರೆ: ಶ್ರೇಷ್ಠ ಮಳಿಗೆಗಳಿಗೆ ಪ್ರಶಸ್ತಿ

ಗದಗ ಉತ್ಸವಕ್ಕೆ ತೆರೆ: ಶ್ರೇಷ್ಠ ಮಳಿಗೆಗಳಿಗೆ ಪ್ರಶಸ್ತಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಎಪಿಎಂಸಿ ಯಾರ್ಡ್‌ನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಿದ್ದ ‘ಗದಗ ಉತ್ಸವ-2026’ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿತು.

ಸಮಾರೋಪ ಸಮಾರಂಭದಲ್ಲಿ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಳ್ಳಿಕೇರಿಯ ಹರ್ಷಾ ಹೋಮ್ ಪ್ರಾಡಕ್ಟ್ಸ್ ಪ್ರಥಮ, ಗದಗದ ಜಿವಿಆರ್ ಮಾರ್ಕೆಟಿಂಗ್ ದ್ವಿತೀಯ ಹಾಗೂ ತ್ರಿವೇಣಿ ಬೋಟಿಕ್ಸ್ ತೃತೀಯ ಸ್ಥಾನ ಪಡೆದವು. ಬೆಂಗಳೂರಿನ ಆ್ಯಪಲ್ ಸಾಲಟೆಕ್ಸ್ಗೆ ವಿಶೇಷ ಬಹುಮಾನ ನೀಡಲಾಯಿತು.

ಗದಗ ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮಿಗಳು ಹಾಗೂ ಮುಖ್ಯ ಅತಿಥಿ ಅಡಿವೆಪ್ಪ ತಿರ್ಲಾಪೂರ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಅಡುಗೆ ಸ್ಪರ್ಧೆಯ ವಿಜೇತರು, ಪ್ರಾಯೋಜಕರು, ಚೇಂಬರ್‌ನ ಮಾಜಿ ಅಧ್ಯಕ್ಷರು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ವಹಿಸಿದ್ದರು. ಉತ್ಸವ ಸಮಿತಿ ಚೇರ್ಮನ್ ಮಧುಸೂದನ ಪುಣೇಕರ ಮಾತನಾಡಿದರು. ಗೌರವ ಕಾರ್ಯದರ್ಶಿ ಚನ್ನವೀರಪ್ಪ ಹುಣಶೀಕಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪಾಧ್ಯಕ್ಷರಾದ ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ, ಸಹ ಗೌರವ ಕಾರ್ಯದರ್ಶಿ ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಕೋಶಾಧ್ಯಕ್ಷ ಅರವಿಂದ ಕಾಮತ, ಮಂಜುನಾಥ ವೀರಲಿಂಗಯ್ಯನಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಂದ್ರು ಬಾಳಿಹಳ್ಳಿಮಠ ಹಾಗೂ ಮುರುಗೇಶ ಬಡ್ನಿ ನಿರೂಪಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img