ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿಯಾಗಿದ್ದಾನೆ.
ಉತ್ತರಾಖಂಡ್ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಸೂರಜ್ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ ಇರ್ಷಾದ್, ಚಿರಾಗ್, ಸದಾನಂದ ಹಾಗೂ ಕಿಶೋರ್ ಜೊತೆ ಸೂರಜ್ ಕೈಜೋಡಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.



