HomeCrime Newsಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳ ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳ ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

For Dai;y Updates Join Our whatsapp Group

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಹರ್ತಿಯ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಕಳೆದ ಎರಡು ತಿಂಗಳಿಂದ ಕೆಲಸ ಮಾಡುತ್ತಿದ್ದರು.

ಇವರ ಬಳಿ ಪಶ್ಚಿಮ ಬಂಗಾಳ ರಾಜ್ಯದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಇತ್ತು. ಆದರೆ, ಜನ್ಮಸ್ಥಳ ಹಾಗೂ ಇತರೆ ದಾಖಲೆಗಳ ಪರಿಶೀಲನೆ ನಡೆಸಿದಾಗ ಇಬ್ಬರೂ ಬಾಂಗ್ಲಾದೇಶದ ನಿವಾಸಿಗಳು ಎಂಬುದು ಪೊಲೀಸರ ಗಮನಕ್ಕೆ ಬಂದಿದೆ. ಹೀಗಾಗಿ, ದಾಖಲೆಗಳ ಸತ್ಯಾಸತ್ಯತೆ ಹಾಗೂ ಇಬ್ಬರ ಹಿನ್ನೆಲೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು, ಮಂಗಳೂರು, ಗಂಗಾವತಿಯಲ್ಲೂ ಕೆಲಸ!

ವಿಚಾರಣೆ ವೇಳೆ ಸಕೀಬ್ ಸಹೀನ್ ಹಾಗೂ ದಿಲಾವರ್ ಹುಸೇನ್ ಈ ಹಿಂದೆ ಬೆಂಗಳೂರು, ಮಂಗಳೂರು, ಗಂಗಾವತಿ ಸೇರಿದಂತೆ ವಿವಿಧೆಡೆ ಕೂಲಿ ಕೆಲಸ ಮಾಡಿದ್ದರೆನ್ನಲಾಗಿದೆ. ಭಾರತಕ್ಕೆ ಯಾವ ಮಾರ್ಗದಲ್ಲಿ ಪ್ರವೇಶಿಸಿದರು, ಎಲ್ಲೆಲ್ಲಿ ವಾಸವಾಗಿದ್ದರು, ಯಾರು ಇವರನ್ನು ಕೆಲಸಕ್ಕೆ ಕರೆತಂದರು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ದಾಖಲೆಗಳು ಹಾಗೂ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ.

ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಹರ್ತಿ ಗ್ರಾಮದ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಕಳೆದ ಎರಡು ತಿಂಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ವಶಕ್ಕೆ ಪಡೆದು ದಾಖಲೆಗಳು ಹಾಗೂ ಹಿನ್ನೆಲೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹರ್ತಿಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಪತ್ತೆಯಾದ ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪಶ್ಚಿಮ ಬಂಗಾಳದ ವಿಳಾಸದ ಆಧಾರ್ ಕಾರ್ಡ್ ಇವರ ಕೈಗೆ ಹೇಗೆ ಬಂತು? ಗದಗಕ್ಕೆ ಇವರನ್ನು ಕರೆತಂದವರು ಯಾರು? ಭಾರತಕ್ಕೆ ಯಾವ ಮಾರ್ಗದಲ್ಲಿ ಪ್ರವೇಶಿಸಿದ್ದರು? ಈ ಎಲ್ಲ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img