HomeUncategorizedಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್

For Dai;y Updates Join Our whatsapp Group

ಯಾದಗಿರಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು BNS ಹಾಗೂ POCSO ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುರಪುರ ತಾಲೂಕಿನ ಗ್ರಾಮವೊಂದಕ್ಕೆ ಸೇರಿದ ಬಾಲಕಿ ಹಾಗೂ ಆಕೆಯ ತಂಗಿಯನ್ನು ಆಗಸ್ಟ್ 18ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಅಕ್ಕ ಪಡೆ ಸಿಬ್ಬಂದಿ ಸಕ್ರ್ಯ ನಾಯಕ ತಾಂಡಾ ಸಮೀಪದ ಭಾಗ್ಯವಂತಿ ಮಠದಿಂದ ರಕ್ಷಿಸಿದ್ದರು.

ರಕ್ಷಿಸಿದ ಬಳಿಕ ಬಾಲಕಿಯರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸಲಾಗಿತ್ತು. ಆಪ್ತ ಸಮಾಲೋಚನೆ ವೇಳೆ ಬಾಲಕಿಯೊಬ್ಬಳು ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ಮಕ್ಕಳನ್ನು ಸಂಬಂಧಿಕರ ಬಳಿ ಬಿಟ್ಟಿದ್ದರು ಎನ್ನಲಾಗಿದೆ. ಬಳಿಕ ಬಾಲಕಿಯರನ್ನು ಮಠದ ಪೂಜಾರಿ ಬಳಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿ ಲೈಂಗಿಕ ದುರುದ್ದೇಶದಿಂದ ತನ್ನೊಂದಿಗೆ ಅಸಹ್ಯವಾಗಿ ವರ್ತಿಸಿದ್ದಾನೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆಗಸ್ಟ್ 20ರಂದು ನಡೆದ ಆಪ್ತ ಸಮಾಲೋಚನೆಯಲ್ಲಿ ಬಾಲಕಿ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ BNS ಕಲಂ 75(2) ಹಾಗೂ POCSO ಕಾಯ್ದೆಯ ಕಲಂ 8 ಮತ್ತು 10ರ ಅಡಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img