ವಿಜಯಸಾಕ್ಷಿ ಸುದ್ದಿ, ಗದಗ: ಪ್ರಕಲ್ಪ ಶಿಕ್ಷಣ ಸಂಸ್ಥೆ(ರಿ.)ಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಸಹೋದರ–ಸಹೋದರಿಯರ ಬಾಂಧವ್ಯದ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ರಾಖಿ ತಯಾರಿಕೆ ಸ್ಪರ್ಧೆ ಆಯೋಜಿಸಲಾಗಿತ್ತು.
ಶಾಲೆಯ 3ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ವಿವಿಧ ವಿನ್ಯಾಸಗಳ ರಾಖಿಗಳನ್ನು ತಯಾರಿಸಿದರು. ರಾಖಿ ಕೇವಲ ಕೈಗೆ ಕಟ್ಟುವ ದಾರವಲ್ಲ, ಅದು ಪರಸ್ಪರ ಪ್ರೀತಿ, ರಕ್ಷಣೆ, ಗೌರವ ಹಾಗೂ ವಿಶ್ವಾಸದ ಸಂಕೇತ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಲ್ಪ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಸ್.ವಿ. ಹುಬ್ಬಳ್ಳಿ ವಹಿಸಿದ್ದರು. ಮಾರ್ಗದರ್ಶಕಿ ಎಸ್.ಎನ್. ಹುಬ್ಬಳ್ಳಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಿಕ್ಷಕಿ ಪುಷ್ಪಾ ಪಿ. ಮೇಗೇರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶೋಭಾ ತದೇವಾಡಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದರು.
ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.



