ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಮುಂದುವರಿದಿದ್ದು, ವಾರಾಂತ್ಯದಲ್ಲೂ ಬಂಗಾರದ ದರ ಹೆಚ್ಚಾಗಿದೆ.
ಪ್ರತಿ ಗ್ರಾಂ ಚಿನ್ನದ ಬೆಲೆ ₹240 ಏರಿಕೆಯಾಗಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು ₹750ರಷ್ಟು ಹೆಚ್ಚಳ ಕಂಡಿದೆ.
ವಿದೇಶಿ ಮಾರುಕಟ್ಟೆಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ. ಸ್ಪಾಟ್ ಗೋಲ್ಡ್ ದರ ಕೂಡ ಸುಮಾರು 2 ಡಾಲರ್ ಹೆಚ್ಚಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,49,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,63,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,49,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,309
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,950
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,232
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.



