HomeBengaluru NewsRenukaswamy Case: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ; ಇಂದು ಕೋರ್ಟ್‌ನಿಂದ ಮಹತ್ವದ ನಿರ್ಧಾರ!

Renukaswamy Case: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ; ಇಂದು ಕೋರ್ಟ್‌ನಿಂದ ಮಹತ್ವದ ನಿರ್ಧಾರ!

For Dai;y Updates Join Our whatsapp Group

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 59ನೇ ಸೆಷನ್ಸ್ ಕೋರ್ಟ್ ಇಂದು ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಕುರಿತು ಆದೇಶ ಪ್ರಕಟಿಸಲಿದೆ.

ಆ.20ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಜೈಲಿನಲ್ಲಿರುವ ಪ್ರದೋಷ್ ಅವರ ನಡವಳಿಕೆ ಕುರಿತು ವರದಿ ಸಲ್ಲಿಸುವಂತೆ ಜೈಲಧಿಕಾರಿಗಳಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ಇಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಜೈಲಧಿಕಾರಿಗಳ ವರದಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿ ಸುಜಾತಾ ಮಡಿವಾಳಪ್ಪ ಸಂಬ್ರಾಣಿ ಅವರು ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿ ಕುರಿತು ಆದೇಶ ಪ್ರಕಟಿಸಲಿದ್ದಾರೆ.

ನ್ಯಾಯಾಲಯವು ಅರ್ಜಿಯನ್ನು ಪುರಸ್ಕರಿಸಿದರೆ, ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯ ಹೇಳಿಕೆ ತನಿಖೆ ಹಾಗೂ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುವ ನಿರೀಕ್ಷೆಯಿದೆ.

ಈ ನಡುವೆ ಪ್ರಕರಣದ ಇನ್ನೂ ಇಬ್ಬರು ಆರೋಪಿಗಳು ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂಬ ಮಾಹಿತಿಯೂ ಇದೆ. ಆದರೆ 17 ಆರೋಪಿಗಳ ಪೈಕಿ ಒಬ್ಬರಿಗೆ ಮಾತ್ರ ಮಾಫಿ ಸಾಕ್ಷಿ ಸ್ಥಾನ ನೀಡುವ ಸಾಧ್ಯತೆ ಇರುವುದರಿಂದ, ನ್ಯಾಯಾಲಯವು ಸಂಬಂಧಿತ ಬಿಎನ್‌ಎಸ್ ಕಾನೂನು ನಿಯಮಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಿದೆ.

ಪ್ರದೋಷ್ ಅವರ ಅರ್ಜಿ ಕುರಿತು ನ್ಯಾಯಾಲಯದ ಆದೇಶದ ಬಳಿಕ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img