HomeKarnataka NewsDrug Factory: ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ; 7 ಮಂದಿ ಬಂಧನ!

Drug Factory: ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ; 7 ಮಂದಿ ಬಂಧನ!

For Dai;y Updates Join Our whatsapp Group

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಅಕ್ರಮವಾಗಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಬೆಳಗಾವಿಯ ಇಬ್ಬರು ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೋಳಿ ಫಾರ್ಮ್‌ನ ಹೆಸರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ನಡೆಸುತ್ತಿದ್ದರು ಎನ್ನಲಾಗಿದೆ. ಇಲ್ಲಿಂದ ಎಂಡಿಎಂಎ ಮಾದರಿಯ ಮಾದಕ ವಸ್ತುವನ್ನು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಆಧರಿಸಿ ಮಹಾರಾಷ್ಟ್ರದ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಅಧಿಕಾರಿಗಳು ರಾಜಗೋಳಿ ಗ್ರಾಮದ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರ ವಿಚಾರಣೆ ಮುಂದುವರಿದಿದೆ.

ಬಂಧಿತರಿಂದ ಸುಮಾರು 1.13 ಕೋಟಿ ರೂ. ಮೌಲ್ಯದ 208 ಗ್ರಾಂ ಮಾದಕ ವಸ್ತು, ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಾಸಾಯನಿಕ ವಸ್ತುಗಳು ಹಾಗೂ ಯಂತ್ರೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

ರಾಜಗೋಳಿ ಗ್ರಾಮವು ಬೆಳಗಾವಿ ಜಿಲ್ಲೆಯಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿರುವುದರಿಂದ ಪ್ರಕರಣ ಮಹತ್ವ ಪಡೆದುಕೊಂಡಿದೆ. ಕರ್ನಾಟಕಕ್ಕೂ ಡ್ರಗ್ಸ್ ಸರಬರಾಜಾಗುತ್ತಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಬಂಧಿತ ಆರೋಪಿಗಳ ಹಿನ್ನೆಲೆ ಹಾಗೂ ಡ್ರಗ್ಸ್ ಜಾಲದ ಇತರ ಸಂಪರ್ಕಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img