HomeBengaluru Newsಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಪೋಸ್ಟ್; ಓರ್ವ ಅರೆಸ್ಟ್!

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಪೋಸ್ಟ್; ಓರ್ವ ಅರೆಸ್ಟ್!

For Dai;y Updates Join Our whatsapp Group

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ರೋಷನ್ ಎಂದು ಗುರುತಿಸಲಾಗಿದೆ. ಟಿಪ್ಪು ಸುಲ್ತಾನ್ ಕಟೌಟ್‌ ಇರುವ ವಿಡಿಯೋಗೆ ದೇಶವಿರೋಧಿ ಹಾಡು ಅಳವಡಿಸಿ, ಅದನ್ನು ವಾಟ್ಸಾಪ್, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಹಂಚಿಕೊಳ್ಳಲಾಗಿದೆ ಎಂಬ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ರೋಷನ್‌ನನ್ನು ಬಂಧಿಸಲಾಗಿದ್ದು, ಅಪ್ರಾಪ್ತರು ಸೇರಿದಂತೆ ಉಳಿದ ಆರು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಡಿಯೋವನ್ನು ಯಾರು ಸೃಷ್ಟಿಸಿದರು, ಹಾಡನ್ನು ಯಾರು ಅಳವಡಿಸಿದರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾರು ಮೊದಲು ಹಂಚಿಕೊಂಡರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದುಬರಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img