HomeGadag Newsಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣೆ; ಕೆಮ್ಮಣ್ಣುಗುಂಡಿ ಕೆರೆ ಕಾಮಗಾರಿಗೆ ಚಾಲನೆ

ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣೆ; ಕೆಮ್ಮಣ್ಣುಗುಂಡಿ ಕೆರೆ ಕಾಮಗಾರಿಗೆ ಚಾಲನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲ್ಲೂಕಿನ ವಡವಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ, ಕೆಮ್ಮಣ್ಣುಗುಂಡಿ ಕೆರೆಯಲ್ಲಿ ವಿ.ಬಿ.ಜಿ.-ಆರ್‌ಎಎಂಜಿ (VBG-RAMG) ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸರ್ಕಾರದ ಆದೇಶದಂತೆ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾಗಿ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಪ್ರತಿ ಕುಟುಂಬಕ್ಕೆ 125 ದಿನಗಳ ಕೆಲಸ ಒದಗಿಸಲಾಗುತ್ತಿದೆ. ಶಿರಹಟ್ಟಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರ ನಿರ್ದೇಶನದಂತೆ ಕಾಮಗಾರಿ ಆರಂಭಿಸಲಾಯಿತು.

ಯೋಜನೆಯಡಿ ಕೆಲಸ ಪಡೆಯಲು ಕೂಲಿ ಕಾರ್ಮಿಕರಿಂದ ನಮೂನೆ-6ರಲ್ಲಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಿದವರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ.

ಕಾಮಗಾರಿ ಆರಂಭಕ್ಕೂ ಮುನ್ನ ಕೂಲಿ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆರೋಗ್ಯ ಸಿಬ್ಬಂದಿಗಳಾದ ಪ್ರತಿಭಾ ಸಿದ್ದರಡ್ಡಿ, ಮಾಂತೇಶ ತಿಮ್ಮಾಪೂರ ಹಾಗೂ ಆಶಾ ಕಾರ್ಯಕರ್ತೆ ನಾಗರತ್ನಾ ತಿಕ್ಕುಂಡಿ ಅವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

ವಡವಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಶಿರಹಟ್ಟಿ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರಶಾಂತ ಆರ್. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ತಪಾಸಣೆ ಮತ್ತು ಕಾಮಗಾರಿ ಆರಂಭದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಎಚ್.ಟಿ. ತಳವಾರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎ.ಎಂ. ಹೀರೆಮಠ, ಇಂಜಿನಿಯರ್ ಲಿಂಗರಾಜು ಅರಸಿಣದ, ಸಿಬ್ಬಂದಿ ಮಂಜುನಾಥ ರಾಜೂರ, ಮೇಟೆಗಳಾದ ನಾಗರಾಜ ತಂಗೋಡ, ಅಶೋಕ ದಾಸರ, ನಾಗರಾಜ ಇಟಗಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img