HomeBengaluru Cityಕೆಪಿಎಸ್‌ಸಿ ಹಗರಣ: ಸಿಎಂ ಗೃಹಕಚೇರಿ ʻಕೃಷ್ಣಾʼಗೆ ಮುತ್ತಿಗೆ ಹಾಕಲು ವಿದ್ಯಾರ್ಥಿಗಳ ಯತ್ನ

ಕೆಪಿಎಸ್‌ಸಿ ಹಗರಣ: ಸಿಎಂ ಗೃಹಕಚೇರಿ ʻಕೃಷ್ಣಾʼಗೆ ಮುತ್ತಿಗೆ ಹಾಕಲು ವಿದ್ಯಾರ್ಥಿಗಳ ಯತ್ನ

For Dai;y Updates Join Our whatsapp Group

ಬೆಂಗಳೂರು: ಕೆಪಿಎಸ್‌ಸಿ ಹಗರಣದಿಂದ ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಪ್ರತಿಭಟನಾಕಾರರು ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಎರಡು ಪ್ರತ್ಯೇಕ ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ‘ಕೃಷ್ಣಾ’ ಕಚೇರಿಯತ್ತ ತೆರಳಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗಲಿಬಿಲಿ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನಾಕಾರರನ್ನು ಪೊಲೀಸರು ಎಳೆದೊಯ್ದು ವಶಕ್ಕೆ ಪಡೆದಿದ್ದು, ಪ್ರತಿಭಟನೆ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸಪಟ್ಟರು.

ಎಬಿವಿಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕಚೇರಿ ಮುಂಭಾಗದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಕಂಡುಬಂತು.

ಎರಡು ತಂಡಗಳಿಂದ ಮುತ್ತಿಗೆ ಯತ್ನ ನಡೆದ ಹಿನ್ನೆಲೆಯಲ್ಲಿ ‘ಕೃಷ್ಣಾ’ ಕಚೇರಿ ಸುತ್ತಮುತ್ತ ಪೊಲೀಸರು ಭದ್ರತೆ ಹೆಚ್ಚಿಸಿದ್ದರು. ಪ್ರತಿಭಟನೆಯ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಕೆಪಿಎಸ್‌ಸಿ ಹಗರಣದ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಬಿವಿಪಿ, ಪರೀಕ್ಷಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img