ಹೈದರಾಬಾದ್: ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆಯಲ್ಲಿ ನಡೆದಿದೆ.
ಬುಧವಾರ ಮುಂಜಾನೆ ಸುಮಾರು 5.20ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡದತ್ತ ತೆರಳುತ್ತಿದ್ದ ಖಾಸಗಿ ಬಸ್, ದುರ್ಗಾಪುರಂ ಸ್ಟೇಜ್ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 43 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.



