ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಆಯೋಜಿಸಿದ್ದ “ಜನಜೀವನದ ಸಮಗ್ರ ಅಭಿವೃದ್ಧಿಗೆ ಸಹಕಾರಿ ವ್ಯವಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ” ಎಂಬ ವಿಷಯದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಗರದ ತೋಂಟದ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಬೆಳ್ಳಿಗೌಡರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚರ್ಚಾ ವಿಷಯದ ವಿರುದ್ಧವಾಗಿ ಮಾತನಾಡಿದ ಕಾವ್ಯಾ ಬೆಳ್ಳಿಗೌಡರ ಪ್ರಥಮ ಬಹುಮಾನ ಪಡೆದರೆ, ವಿಷಯದ ಪರವಾಗಿ ಮಾತನಾಡಿದ ಕಾಲೇಜಿನ ವಿದ್ಯಾರ್ಥಿ ಭರತಕುಮಾರ ಬಿಳೆಯಲಿ ತೃತೀಯ ಬಹುಮಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ, ಪ್ರಾಚಾರ್ಯ ವೈ.ಎಸ್. ಮತ್ತೂರ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.



