HomeGadag Newsಕೃಷ್ಣ–ವಿಶ್ವಕರ್ಮ ಜಯಂತಿಗೆ ಭರದ ಸಿದ್ಧತೆ ; ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ

ಕೃಷ್ಣ–ವಿಶ್ವಕರ್ಮ ಜಯಂತಿಗೆ ಭರದ ಸಿದ್ಧತೆ ; ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮುಂಬರುವ ಶ್ರೀ ಕೃಷ್ಣ ಜಯಂತಿ ಹಾಗೂ ವಿಶ್ವಕರ್ಮ ಜಯಂತಿಯನ್ನು ಎಲ್ಲರ ಸಹಕಾರ ಮತ್ತು ಸಮನ್ವಯದೊಂದಿಗೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಕೃಷ್ಣ ಜಯಂತಿ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಪ್ರತ್ಯೇಕವಾಗಿ ನಡೆದ ಪೂರ್ವಸಿದ್ಧತಾ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆ. 4ರಂದು ಶ್ರೀ ಕೃಷ್ಣ ಜಯಂತಿ

ಸೆಪ್ಟೆಂಬರ್ 4ರಂದು ಜರುಗಲಿರುವ ಶ್ರೀ ಕೃಷ್ಣ ಜಯಂತಿಯನ್ನು ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ, ವೇದಿಕೆ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕುಗಳು, ಶಾಲಾ–ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಶ್ರೀ ಕೃಷ್ಣನ ಜೀವನ, ತತ್ವಾದರ್ಶಗಳು ಹಾಗೂ ಭಗವದ್ಗೀತೆಯ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಬೇಕು ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು, ಊಟೋಪಹಾರ, ಆಸನ ವ್ಯವಸ್ಥೆ, ವೇದಿಕೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸೆ. 17ರಂದು ವಿಶ್ವಕರ್ಮ ಜಯಂತಿ

ಇದೇ ವೇಳೆ ಸೆಪ್ಟೆಂಬರ್ 17ರಂದು ಜರುಗಲಿರುವ ವಿಶ್ವಕರ್ಮ ಜಯಂತಿಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ದುರಗೇಶ್ ಕೆ.ಆರ್. ತಿಳಿಸಿದರು.

ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರಿಗೆ ಆಹ್ವಾನ ನೀಡಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದ ಜತೆಗೆ ಶಾಲಾ–ಕಾಲೇಜುಗಳು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ವಿಶ್ವಕರ್ಮರ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತರು ಹಾಗೂ ಹಿರಿಯರನ್ನು ಗುರುತಿಸಿ ಸನ್ಮಾನಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತಿ ಕಾರ್ಯಕ್ರಮದ ಅಂಗವಾಗಿ ವೇದಿಕೆ, ಆಸನ, ಕುಡಿಯುವ ನೀರು, ಊಟೋಪಹಾರ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.

ಎರಡೂ ಪೂರ್ವಸಿದ್ಧತಾ ಸಭೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಮಹನೀಯರ ಜೀವನ, ತತ್ವಾದರ್ಶ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ತಲುಪಿಸುವ ಮೂಲಕ ಯುವಜನತೆಗೂ ಪ್ರೇರಣೆ ನೀಡುವಂತಾಗಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು.
— ಡಾ. ದುರಗೇಶ್ ಕೆ.ಆರ್., ಅಪರ ಜಿಲ್ಲಾಧಿಕಾರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img