HomeKarnataka Newsಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೇಘಾವೃತ ವಾತಾವರಣದೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯ ನಡುವೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಆ.30ರಂದು ಎಲ್ಲೆಲ್ಲಿ ಮಳೆ?

ನಾಳೆ (ಆ.30) ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಾಳಿಯ ವೇಗ ತಗ್ಗಲಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗಬಹುದು.

ಹೀಗಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಚರಿಸುವವರು ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img