HomeCrime Newsಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

For Dai;y Updates Join Our whatsapp Group

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ.

https://www.facebook.com/share/v/1Yb23MG4VV/

ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿರುವ ಆರೋಪವೂ ಕೇಳಿಬಂದಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯ… ನಂತರ ಇಸ್ರೋ ಜಾಬ್ ಆಫರ್..!

ಆರೋಪಿಯು ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು, ತಾನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ.

https://www.facebook.com/share/v/1Yb23MG4VV/

ನಂತರ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವಿವಿಧ ಪ್ರಕ್ರಿಯೆಗಳು ಹಾಗೂ ದಾಖಲೆಗಳ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪ ಕೇಳಿ ಬಂದಿದೆ. ಫೋನ್‌ಪೇ ಸೇರಿದಂತೆ ಆನ್‌ಲೈನ್ ಹಣ ವರ್ಗಾವಣೆ ವ್ಯವಸ್ಥೆಯ ಮೂಲಕ ಹಣ ಪಡೆದುಕೊಂಡಿದ್ದಾನೆ ಎನ್ನಲಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರನ್ನು ಗುರಿಯಾಗಿಸಿಕೊಂಡು ಈತ ವಂಚನೆಯ ಜಾಲ ಹೆಣೆದಿದ್ದಾನೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಯುವತಿಯರನ್ನೂ ಬಲೆಗೆ ಬೀಳಿಸಿದ ಆರೋಪ

ಆರೋಪಿಯು ಕೇವಲ ಯುವಕರನ್ನಷ್ಟೇ ಗುರಿಯಾಗಿಸಿರಲಿಲ್ಲ. ಸಾಮಾಜಿಕ ಜಾಲತಾಣದ ಮೂಲಕ ಯುವತಿಯರೊಂದಿಗೆ ಪರಿಚಯ ಮಾಡಿಕೊಂಡು ಅವರನ್ನೂ ತನ್ನ ವಂಚನೆಯ ಜಾಲಕ್ಕೆ ಸೆಳೆಯುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈತನ ವಿರುದ್ಧ ವಂಚನೆಗೊಳಗಾದವರ ಸಂಖ್ಯೆ ಇನ್ನಷ್ಟು ಇರಬಹುದೆಂಬ ಅನುಮಾನವೂ ವ್ಯಕ್ತವಾಗಿದ್ದು, ಪ್ರಕರಣದ ವ್ಯಾಪ್ತಿಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೋಸ ಹೋದ ಯುವಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದರು

ಉದ್ಯೋಗ ಕೊಡಿಸುವುದಾಗಿ ಹೇಳಿ ಹಣ ಪಡೆದುಕೊಂಡ ನಂತರವೂ ಯಾವುದೇ ಕೆಲಸವಾಗದ ಹಿನ್ನೆಲೆಯಲ್ಲಿ ಕೆಲ ಯುವಕರಿಗೆ ಅನುಮಾನ ಮೂಡಿದೆ ಎನ್ನಲಾಗಿದೆ. ಬಳಿಕ ಪರಸ್ಪರ ಮಾಹಿತಿ ಹಂಚಿಕೊಂಡ ಯುವಕರು ಆರೋಪಿಯನ್ನು ಹಿಡಿದು ಗದಗ ಶಹರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ವಶಕ್ಕೆ ಸಿಕ್ಕ ನಂತರ ಆರೋಪಿಯ ವಿರುದ್ಧ ಹಲವು ವಿಚಾರಗಳು ಹೊರಬರುತ್ತಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಮೊಬೈಲ್ ಪರಿಶೀಲನೆ ವೇಳೆ ಬೆಚ್ಚಿಬೀಳಿಸಿದ ವಿಡಿಯೋಗಳು..?

ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದ ವೇಳೆ ಹಲವು ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಮೊಬೈಲ್‌ನಲ್ಲಿದ್ದ ಕೆಲವು ಅಶ್ಲೀಲ ವಿಡಿಯೋಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆ ವಿಡಿಯೋಗಳ ಹಿನ್ನೆಲೆ ಏನು, ಅವುಗಳಲ್ಲಿ ಯಾರಿದ್ದಾರೆ ಮತ್ತು ಅವುಗಳನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿತ್ತು ಎಂಬ ಕುರಿತು ತನಿಖೆ ನಡೆಯಬೇಕಿದೆ. ಈ ಬಗ್ಗೆ ಸಂಪೂರ್ಣ ಸತ್ಯ ತನಿಖೆಯ ಬಳಿಕವೇ ಹೊರಬರಬೇಕಿದೆ.

‘ಸಾಲ ತೀರಿಸಲು ಈ ಕೆಲಸಕ್ಕೆ ಇಳಿದೆ’ ಎಂದ ಆರೋಪ..!

ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ. ಆ ಸಾಲವನ್ನು ತೀರಿಸುವ ಉದ್ದೇಶದಿಂದ ಈ ಕೆಲಸಕ್ಕೆ ಇಳಿದಿದ್ದೇನೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಕೇಳಿಬಂದಿದೆ. ಡಿಪ್ಲೋಮಾ ಶಿಕ್ಷಣ ಪಡೆದ ಯುವಕನೊಬ್ಬ ಸಾಲದ ಸುಳಿಯಿಂದ ಹೊರಬರುವ ನೆಪದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಗುರಿಯಾಗಿಸಿಕೊಂಡು ವಂಚನೆಗೆ ಇಳಿದಿದ್ದಾನೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ.

ಬ್ಯಾಗ್‌ನಲ್ಲಿ ನಿರೋಧದ ಪ್ಯಾಕೆಟ್ ಪತ್ತೆ; ತನಿಖೆ ಚುರುಕು

ಆರೋಪಿಯ ಬ್ಯಾಗ್ ಪರಿಶೀಲನೆ ವೇಳೆ ನಿರೋಧದ ಪ್ಯಾಕೆಟ್ ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಇದಕ್ಕೆ ವಂಚನೆ ಪ್ರಕರಣದೊಂದಿಗೆ ಯಾವುದೇ ಸಂಬಂಧವಿದೆಯೇ ಅಥವಾ ಬೇರೆ ಯಾವುದಾದರೂ ಉದ್ದೇಶವಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಮೊಬೈಲ್‌ನಲ್ಲಿ ಪತ್ತೆಯಾದ ವಿಡಿಯೋಗಳು ಹಾಗೂ ಇತರ ಮಾಹಿತಿಯ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

ವಂಚನೆಯ ಜಾಲದ ಹಿಂದೆ ಇನ್ನಷ್ಟು ಮಂದಿ ಇದ್ದಾರೆಯೇ..?

ಇಸ್ರೋದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದುಕೊಂಡಿರುವ ಆರೋಪದ ಹಿಂದೆ ಇನ್ನೂ ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ.

ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ ಎಷ್ಟು ಮಂದಿಯನ್ನು ಸಂಪರ್ಕಿಸಲಾಗಿದೆ..? ಎಷ್ಟು ಜನರಿಂದ ಹಣ ಪಡೆದುಕೊಳ್ಳಲಾಗಿದೆ..? ವಂಚನೆಯ ಹಣ ಎಲ್ಲಿಗೆ ಹೋಗಿದೆ..? ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ..? ಎಂಬ ಹಲವು ಪ್ರಶ್ನೆಗಳಿಗೆ ಗದಗ ಶಹರ ಪೊಲೀಸರ ತನಿಖೆಯೇ ಉತ್ತರ ನೀಡಬೇಕಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಗದಗ ಶಹರ ಪೊಲೀಸರು ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img