HomeGadag Newsರಾಯಪ್ಪ ಹತ್ತಿಕಾಳಗೆ ಗೌರವ ಸನ್ಮಾನ

ರಾಯಪ್ಪ ಹತ್ತಿಕಾಳಗೆ ಗೌರವ ಸನ್ಮಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮಧ್ಯ ಕರ್ನಾಟಕದ ಅತಿ ದೊಡ್ಡ ಫೋಟೋಗ್ರಾಫಿ ಹಾಗೂ ವಿಡಿಯೋಗ್ರಫಿ ಛಾಯಾಮೇಳವೆಂದು ಗುರುತಿಸಿಕೊಂಡಿರುವ ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮವು ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ರಾಯಪ್ಪ ಹತ್ತಿಕಾಳ ಅವರನ್ನು ದೇವನಗರಿ ಪ್ರೊ ಇಮೇಜ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಛಾಯಾಗ್ರಹಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಸೇವೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗುರುತಿಸಿ ಈ ವಿಶೇಷ ಗೌರವವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಸನ್ಮಾನಿತರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಗದಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಪವನ ಕೆ. ಮೇಹರವಾಡೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಛಾಯಾಗ್ರಾಹಕರ ಸಂಘಗಳ ಉಪಾಧ್ಯಕ್ಷರಿಗೂ ಗೌರವ ಸನ್ಮಾನ ನೀಡಿ ಅಭಿನಂದಿಸಲಾಯಿತು.

ಗದಗ ಜಿಲ್ಲೆಯ ಛಾಯಾಗ್ರಾಹಕರಿಗೆ ಈ ಪ್ರತಿಷ್ಠಿತ ವೇದಿಕೆಯಲ್ಲಿ ದೊರೆತಿರುವ ಗೌರವವು ಜಿಲ್ಲೆಯ ಛಾಯಾಗ್ರಹಣ ಕ್ಷೇತ್ರಕ್ಕೆ ಮತ್ತಷ್ಟು ಹೆಮ್ಮೆ ತಂದಿದೆ. ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಛಾಯಾಗ್ರಾಹಕರನ್ನು ಗುರುತಿಸಿ ಗೌರವಿಸಿದ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಛಾಯಾಗ್ರಾಹಕರ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img