ವಿಜಯಸಾಕ್ಷಿ ಸುದ್ದಿ, ಗದಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಡಾ. ಎಚ್.ಕೆ. ಪಾಟೀಲ, ಶಾಸಕ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಡಿ.ಆರ್. ಪಾಟೀಲ, ವಿನಯ ಕುಲಕರ್ಣಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ಬಿ.ಆರ್. ಯಾವಗಲ್, ರಾಮಣ್ಣ ಲಮಾಣಿ ಸೇರಿದಂತೆ ಮಿಥುನ ಪಾಟೀಲ, ಬಿ.ಬಿ. ಅಸೂಟಿ, ವಾಸಣ್ಣ ಕುರುಡಗಿ ಹಾಗೂ ಇತರ ಗಣ್ಯರು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಾನಕಿ ಎಸ್., ಐಜಿಪಿ ಸಂದೀಪ್ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಡಿಸಿಎಫ್ ಸಂತೋಷಕುಮಾರ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ್ ನಾಡಗೌಡರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗದಗ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಪೂರ್ವಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿತ್ತು. ಹೆಲಿಪ್ಯಾಡ್‌ನಲ್ಲಿ ಪೊಲೀಸ್ ಇಲಾಖೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

