ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ತಡರಾತ್ರಿ ಎಟಿಎಂ ಕಳ್ಳತನ ನಡೆದಿರುವ ಘಟನೆ ನಡೆದಿದೆ.
ಗೊಳಸಂಗಿ ಗ್ರಾಮದ ಕೆನರಾ ಬ್ಯಾಂಕ್‌ಗೆ ಸೇರಿದ ಎಟಿಎಂ ಅನ್ನು ಮುಸುಕುಧಾರಿಗಳ ಗುಂಪೊಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದೆ. ತಡರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಎಟಿಎಂ ಮಷಿನ್‌ನ್ನೇ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.
ಎಟಿಎಂ ಮಷಿನ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಇತ್ತು ಎಂದು ಶಂಕಿಸಲಾಗಿದೆ. ಕಳ್ಳರು ಎಟಿಎಂ ಮಷಿನ್ ಸಮೇತ ಪರಾರಿಯಾಗಿರುವುದರಿಂದ ನಗದು ಎಷ್ಟು ಇತ್ತು ಎಂಬುದು ಪೊಲೀಸ್ ತನಿಖೆ ಬಳಿಕವಷ್ಟೇ ತಿಳಿಯಬೇಕಿದೆ.
ಘಟನೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಸುಳಿವು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.



