HomeIndia Newsರಾಮ ಜನ್ಮಭೂಮಿ ಟ್ರಸ್ಟ್ʼಗೆ ಮೂವರು ಹೊಸ ಟ್ರಸ್ಟಿಗಳ ನೇಮಕ; ಶೀಘ್ರದಲ್ಲೇ ಸಿಇಒ ಹೆಸರು ಪ್ರಕಟ

ರಾಮ ಜನ್ಮಭೂಮಿ ಟ್ರಸ್ಟ್ʼಗೆ ಮೂವರು ಹೊಸ ಟ್ರಸ್ಟಿಗಳ ನೇಮಕ; ಶೀಘ್ರದಲ್ಲೇ ಸಿಇಒ ಹೆಸರು ಪ್ರಕಟ

For Dai;y Updates Join Our whatsapp Group

ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೂವರು ಹೊಸ ಟ್ರಸ್ಟಿಗಳನ್ನು ನೇಮಿಸಿದೆ. ಶೀಘ್ರದಲ್ಲೇ ಹೊಸ ಸಿಇಒ ಹೆಸರನ್ನೂ ಟ್ರಸ್ಟ್ ಘೋಷಿಸಲಿದೆ.

ದೆಹಲಿ ಮೂಲದ ಮಹೇಶ್ ಭಾಗ್‌ಚಂದ್ಕ, ಅಯೋಧ್ಯೆಯ ನಿವಾಸಿ ಮದನ್ ಮೋಹನ್ ಪಾಂಡೆ ಹಾಗೂ ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಅವರನ್ನು ಹೊಸ ಟ್ರಸ್ಟಿಗಳನ್ನಾಗಿ ನೇಮಿಸಲಾಗಿದೆ. ಮಹೇಶ್ ಭಾಗ್‌ಚಂದ್ಕ ಅವರು ದಿವಂಗತ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರ ಸಂಬಂಧಿ ಎಂದು ತಿಳಿದುಬಂದಿದೆ.

ಮದನ್ ಮೋಹನ್ ಪಾಂಡೆ ಹಾಗೂ ನಿರ್ಮಲಾ ಯಾದವ್ ಅವರ ನೇಮಕಾತಿಯ ಕುರಿತು ರಾಮಮಂದಿರ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ನಿರ್ಧರಿಸಲಾಗಿದೆ. ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಸಭೆ ಮುಕ್ತಾಯದ ಬಳಿಕ ಹೊಸ ಸಿಇಒ ಹೆಸರು ಪ್ರಕಟವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img