ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿ ಪ್ಲಾಂಟೇಶನ್ ಬಳಿ ನಡೆದಿದೆ.
ಬೆಂಗಳೂರಿನಿಂದ ವಿ.ಕೋಟಗೆ ತೆರಳುತ್ತಿದ್ದ ವೇಳೆ ಟಿಪ್ಪರ್ನ ಇಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಸಂತೋಷ್ ಟಿಪ್ಪರ್ ನಿಲ್ಲಿಸಿ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂಜಿನ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಟಿಪ್ಪರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ನಂಗಲಿ ಮೂಲದ ಸುರೇಶ್ ಅವರಿಗೆ ಸೇರಿದ ಟಿಪ್ಪರ್ ಇದಾಗಿದೆ ಎಂದು ತಿಳಿದುಬಂದಿದೆ. ಘಟನೆ ಬೆಮೆಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.



