HomePolitics Newsಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

For Dai;y Updates Join Our whatsapp Group

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಎಂದು ತೀವ್ರ ಆರೋಪ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ ಕೋವಿಡ್ ಹಗರಣ, ಬೋವಿ ನಿಗಮ ಹಗರಣ, ನೀಟ್ ಹಗರಣ, ದೇವರಾಜ್ ಟ್ರಕ್ ಟರ್ಮಿನಲ್ ಹಗರಣ, ಕಿಯೋನಿಕ್ಸ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಪರಶುರಾಮ್ ಥೀಮ್ ಪಾರ್ಕ್ ಹಗರಣ,

ಬಿಟ್‌ಕಾಯಿನ್ ಪ್ರಕರಣ ಹಾಗೂ ಕೆಕೆಆರ್‌ಡಿ ಅಕ್ರಮ ಸೇರಿದಂತೆ ನೂರಾರು ಕೋಟಿ ರೂಪಾಯಿ ಮೌಲ್ಯದ ಹಗರಣಗಳು ನಡೆದಿವೆ ಎಂದು ಆರೋಪಿಸಿದ ಪ್ರದೀಪ್ ಈಶ್ವರ್, ಯಡಿಯೂರಪ್ಪ, ಬೊಮ್ಮಾಯಿ, ಶ್ರೀರಾಮುಲು, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಸುಧಾಕರ್, ಜನಾರ್ದನ ರೆಡ್ಡಿ ಹಾಗೂ ಅಶೋಕ್ ಸೇರಿದಂತೆ ಅನೇಕರ ಅವಧಿಯಲ್ಲಿ ಈ ಹಗರಣಗಳು ನಡೆದಿವೆ ಎಂದು ದೂರಿ, ಇದಕ್ಕೆ ಬಿಜೆಪಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆಯೆಂದೂ, ಅಭಿವೃದ್ಧಿ ಕಾರ್ಯಗಳಿಗೆ 57 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆಯೆಂದೂ ತಿಳಿಸಿದ ಅವರು, ಬರ ಪರಿಸ್ಥಿತಿಯ ಬಗ್ಗೆ ಮಾತನಾಡಲು ವಿಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ಶ್ರೀರಾಮುಲು ಅವರು ಹಿಂದಿನ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಅಗೌರವದಿಂದ ಮಾತನಾಡಿದ್ದನ್ನು ಆಕ್ಷೇಪಿಸಿದ ಪ್ರದೀಪ್ ಈಶ್ವರ್, ಇನ್ನು ಮುಂದೆ ರಾಹುಲ್ ಗಾಂಧಿ ಬಗ್ಗೆ ಅಗೌರವದಿಂದ ಮಾತನಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ಮಾತಿನಲ್ಲಿ ನಿಯಂತ್ರಣ ಇಟ್ಟುಕೊಳ್ಳುವಂತೆ ಶ್ರೀರಾಮುಲು ಅವರಿಗೆ ಆಗ್ರಹಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img