ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಸಿಹಿಸುದ್ದಿ ಸಿಕ್ಕಿದೆ. ನಗದುರಹಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ನಗದುರಹಿತ ಆರೋಗ್ಯ ಭಾಗ್ಯ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ.
ಸಂಧ್ಯಾ ಕಿರಣ ನಗದುರಹಿತ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಲಭ್ಯವಾಗಲಿದ್ದು, ವಾರ್ಷಿಕ 5 ಲಕ್ಷ ರೂಪಾಯಿಗಳವರೆಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಪಡೆಯಬಹುದಾಗಿದೆ. ನಿವೃತ್ತ ನೌಕರರಿಗೆ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸುವಂತೆ ನೌಕರರ ಸಂಘ ಈ ಹಿಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.



