ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದ ಘಟನೆ ಹೆಬ್ಬಾಳ ಸಮೀಪ ನಡೆದಿದೆ.
ಕೆಎಂಎಫ್‌ಗೆ ಹೊರಟಿದ್ದ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಟ್ಯಾಂಕರ್‌ನ ಮುಚ್ಚಳ ಮುಚ್ಚಲು ಸಾರ್ವಜನಿಕರು ಪರದಾಡಿದ್ದಾರೆ. ಇನ್ನೂ ಕೆಲವರು ನೀರಿನ ಬಾಟಲಿಗಳಲ್ಲಿ ಹಾಲು ತುಂಬಿಕೊಂಡಿದ್ದಾರೆ.
ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಪಾಲಾಗಿದೆ. ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



