ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ಸೆಪ್ಟೆಂಬರ್ 4 ಮತ್ತು 5ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.4 ಮತ್ತು 5ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಮಳೆ, ಬಿರುಗಾಳಿ ಸಾಧ್ಯತೆ:
ಸೆ.4ರಂದು ವಿಜಯಪುರ, ಗದಗ, ರಾಯಚೂರು, ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಸೆ.5ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಮಳೆ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸೆ.4ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಸೆ.5ರಂದು ಇದೇ ಜಿಲ್ಲೆಗಳ ಹಲವೆಡೆ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಎಲ್ಲಿ ಎಷ್ಟು ಮಳೆ?
ಸೆ.3ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ 3 ಸೆಂ.ಮೀ. ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬಸಗೋಡ, ಗದಗ ಮತ್ತು ಗೋಕರ್ಣದಲ್ಲಿ ತಲಾ 2 ಸೆಂ.ಮೀ. ಮಳೆ ದಾಖಲಾಗಿದೆ.
ಉತ್ತರ ಕನ್ನಡದ ಕಾರವಾರ, ಕುಮಟಾ ಹಾಗೂ ಮಾಣ್ಕಿ, ಕೊಪ್ಪಳದ ತಾವರಗೇರಾ ಸೇರಿದಂತೆ ಹಲವು ಪ್ರದೇಶಗಳಲ್ಲೂ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆ, ಉಡುಪಿ ಜಿಲ್ಲೆಯ ಬ್ರಹ್ಮಾವರ, ರಾಯಚೂರಿನ ದೇವದುರ್ಗ ಸೇರಿದಂತೆ ಹಲವು ಕಡೆ 1 ಸೆಂ.ಮೀ. ಮಳೆ ದಾಖಲಾಗಿದೆ.
ಮುಂದಿನ ದಿನಗಳಲ್ಲೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹಾಗೂ ಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಕುರಿತು IMD ಮುನ್ಸೂಚನೆ ನೀಡಿದೆ.



