ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಪ್ರಕೋಷ್ಟವು ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ–2026ಕ್ಕೆ ಗಜೇಂದ್ರಗಡ ತಾಲೂಕಿನ ಹಾಳಕೆರೆ ಗ್ರಾಮದ ಶಿಕ್ಷಕ ಮಹಾಂತೇಶ ಹೊನ್ನವಾಡ ಆಯ್ಕೆಯಾಗಿದ್ದಾರೆ.
ರೋಣ ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ರಾಜೀವ್ ಗಾಂಧಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅವರ ಶಿಕ್ಷಣ ಕ್ಷೇತ್ರದ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.



