HomeGadag Newsರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಅಕ್ಕಿ ಆಯ್ಕೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಅಕ್ಕಿ ಆಯ್ಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಅಕ್ಕಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರೋಣ ತಾಲೂಕಿನ ಹೊಳೆಆಲೂರ ಎಸ್‌ಎಸ್‌ಆರ್‌ಡಿನ ಜನಸೇವಾ ಸಂಸ್ಥೆ (ರಿ) ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸೆ.12ರಂದು ಗದಗದ ಜೆ.ಟಿ. ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಅಕ್ಕಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img