HomePolitics Newsಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

For Dai;y Updates Join Our whatsapp Group

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು ವಿದೇಶಗಳಲ್ಲೂ ಹೂಡಿಕೆ ಮಾಡುವಂತೆ ಹೇಳುತ್ತಾರೆ. ಸತೀಶ್ ಜಾರಕಿಹೊಳಿ ಅವರು ಅದನ್ನೇ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ತನಿಖೆ ನಡೆಯಬೇಕು ಎಂದು ಹೇಳಿದೆ. ಇದು ಕೇವಲ ಆರೋಪವಾಗಿದ್ದು, ಸಾಕ್ಷ್ಯ ಸಿಕ್ಕಿದೆ ಎಂದು ಹೇಳಲಾಗಿದೆಯಾದರೂ ಯಾವ ಸಾಕ್ಷ್ಯ ಸಿಕ್ಕಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಪ್ರಶ್ನಿಸಿದರು.

ಇಡಿ ನಡೆಸಿರುವ ದಾಳಿಗಳ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಇಂತಹ 196 ದಾಳಿಗಳ ಬಗ್ಗೆ ತಾವು ಈ ಹಿಂದೆ ಅಂಕಿ-ಅಂಶ ನೀಡಿದ್ದಾಗಿ ಹೇಳಿದರು. ಆದರೆ ಈ ಪೈಕಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಆರೋಪಿಸಿದರು. ಎಲ್ಲಾ ದಾಳಿಗಳಿಗೂ ಇಡಿ ಪತ್ರಿಕಾ ಪ್ರಕಟಣೆ ಹೊರಡಿಸುತ್ತದೆ. ಹಾಗಾದರೆ ಶಿಕ್ಷೆಯ ಪ್ರಮಾಣ ಇಷ್ಟೊಂದು ಕಡಿಮೆ ಏಕೆ ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಅವರು ತಾವು ಯಾವುದೇ ಕಾನೂನುಬಾಹಿರ ಹೂಡಿಕೆ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ವಿದೇಶದಲ್ಲಿ ಹೂಡಿಕೆ ಮಾಡಲು ಉದ್ದೇಶಿಸಿದ್ದಾಗಿ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಕಾನೂನುಬಾಹಿರವಾಗಿ ಹೂಡಿಕೆ ಮಾಡಿದ್ದರೆ ಮಾತ್ರ ಅದು ತಪ್ಪಾಗುತ್ತದೆ ಎಂದು ಹೇಳಿದರು.

ಕಾಂಗೋ, ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹೂಡಿಕೆ ಮಾಡುವುದೇ ತಪ್ಪು ಎಂದು ಎಲ್ಲಿಯೂ ಹೇಳಿಲ್ಲ. ಸತೀಶ್ ಜಾರಕಿಹೊಳಿ ಅವರು ಹೂಡಿಕೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಇಡಿ ಲಂಚದ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸುತ್ತಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಡಿ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಇನ್ನು ಪಿಡಬ್ಲ್ಯುಡಿ ಇಲಾಖೆಯಲ್ಲಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಗಾಳಿ ಸುದ್ದಿಗಳಿಗೆ ತಾವು ಉತ್ತರಿಸುವುದಿಲ್ಲ ಎಂದರು. ಇಡಿ ಆರೋಪ ಮಾಡಿದ್ದರೆ ಅದಕ್ಕೆ ದಾಖಲೆಗಳನ್ನು ನೀಡಲಿ. ಗುತ್ತಿಗೆಗಳಲ್ಲಿ ಲಂಚ ಪಡೆದ ಹಣವನ್ನೇ ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬುದಕ್ಕೆ ದಾಖಲೆಗಳನ್ನು ನೀಡಲಿ ಎಂದು ಸವಾಲು ಹಾಕಿದರು.

ಅಲ್ಲದೆ, ವಿದೇಶ ಪ್ರಯಾಣ ಮತ್ತು ಹೂಡಿಕೆಗಳ ಬಗ್ಗೆ ತನಿಖೆ ನಡೆಸುವುದಾದರೆ ಪಾಸ್‌ಪೋರ್ಟ್‌ಗಳನ್ನು ಪರಿಶೀಲಿಸಲಿ ಎಂದ ಅವರು, ತಮ್ಮ ಪಾಸ್‌ಪೋರ್ಟ್‌ಗಳನ್ನು ನೀಡಲು ಸಿದ್ಧವಿರುವುದಾಗಿ ಹೇಳಿದರು. ಬಿಜೆಪಿ ಶಾಸಕರು ಹಾಗೂ ಮಾಜಿ ಸಚಿವರು ಕೂಡ ತಮ್ಮ ಪಾಸ್‌ಪೋರ್ಟ್‌ಗಳನ್ನು ನೀಡಲಿ. ಯಾರು ದುಬೈ, ಮಾರಿಷಸ್ ಸೇರಿದಂತೆ ಯಾವ ದೇಶಗಳಿಗೆ ಎಷ್ಟು ಬಾರಿ ಹೋಗಿ ಬಂದಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯಲಿ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img