ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಾಂಗ್ರೆಸ್ ಪಕ್ಷದ ನೂತನ ಗದಗ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕ ವಾಸಣ್ಣ ಕುರಡಗಿ ಅವರು ಸುದೀರ್ಘ ರಾಜಕೀಯ ಅನುಭವ ಹಾಗೂ ಉತ್ತಮ ಸಂಘಟನಾ ಸಾಮರ್ಥ್ಯ ಹೊಂದಿದ್ದಾರೆ ಎಂದು ಶಿರಹಟ್ಟಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಗುರುನಾಥ ದಾನಪ್ಪನವರ ಹೇಳಿದರು.
ಗದಗ ಪ್ರವಾಸಿ ಮಂದಿರದಲ್ಲಿ ವಾಸಣ್ಣ ಕುರಡಗಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಹಲವು ವರ್ಷಗಳಿಂದ ಸಂಘಟನೆಗೆ ಕೊಡುಗೆ ನೀಡಿರುವ ವಾಸಣ್ಣ ಅವರು ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಬೆರೆಯುವ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದ್ದು, ಅವರ ಅನುಭವ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಬಲ ನೀಡಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಫಕೀರೇಶ ಮ್ಯಾಟಣ್ಣವರ, ತಿಪ್ಪಣ್ಣ ಸಂಶಿ, ರಾಜಣ್ಣ ಮಡಿವಾಳರ, ಫಕೀರೇಶ ನಡವಿನಕೇರಿ, ಜಗದೀಶ ಹುಲಿಗೆಮ್ಮನವರ, ಪವನ ಈಳಗೇರ, ಮಾರ್ತಾಂಡಪ್ಪ ಪೆದ್ದರ, ಹನಮಂತ ದೊಡ್ಡಮನಿ, ಕರಿಯಪ್ಪ ಸಾಂದ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



