ಕೋಲಾರ: ಈರುಳ್ಳಿ ಹಾಗೂ ಬೆಳ್ಳುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್‌ವೊಂದು ಪಲ್ಟಿಯಾಗಿ ರಸ್ತೆ ತುಂಬಾ ಈರುಳ್ಳಿ, ಬೆಳ್ಳುಳ್ಳಿ ಚೆಲ್ಲಾಡಿದ ಘಟನೆ ಕೆಜಿಎಫ್‌ನ ವಡ್ಡರಹಳ್ಳಿ ಗ್ರಾಮದ ಬಳಿ ನಡೆದಿದೆ.
ಚೆನ್ನೈ–ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಕ್ಯಾಂಟರ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬೇತಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ಯಾಂಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಸಾಮಗ್ರಿಗಳು ಕಳುವಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.



