ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ ಹಾಸ್ಟೆಲ್ಗೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಹಾಸ್ಟೆಲ್ನಲ್ಲಿ ಊಟ, ವಸತಿ ಸೇರಿದಂತೆ ವಿವಿಧ ವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು.
ಬಳಿಕ ಹಾಸ್ಟೆಲ್ನಲ್ಲೇ ವಿದ್ಯಾರ್ಥಿಗಳೊಂದಿಗೆ ಮುದ್ದೆ ಊಟ ಸವಿದರು. ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳು ಹಾಗೂ ಹಾಸ್ಟೆಲ್ನಲ್ಲಿನ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು.
ಇಂದು ಕನಕಪುರದಲ್ಲಿ ಕುಟುಂಬದ ಖಾಸಗಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರದ ನಿವಾಸದಲ್ಲಿ ವಾಸ್ತವ್ಯ ಹೂಡಿದರು.
ಈ ವೇಳೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.



