ವಿಜಯಸಾಕ್ಷಿ ಸುದ್ದಿ, ಗದಗ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಭಾನುವಾರ ಗದಗದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಅಳವಡಿಸಲಾಗಿರುವ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಲೋಕಾರ್ಪಣೆ ಮಾಡಿದರು.
ಆಸ್ಪತ್ರೆಯ ವೈದ್ಯಕೀಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿವಿಧ ವಿಭಾಗಗಳಿಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಅಗತ್ಯತೆಯನ್ನು ಪೂರೈಸಲು ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಡಾ.ಕರಿಗೌಡ್ರ, ಡಾ.ರಾಘವೇಂದ್ರ ಸೇರಿದಂತೆ ಅಧಿಕಾರಿಗಳು ಹಾಗೂ ವೈದ್ಯರು ಉಪಸ್ಥಿತರಿದ್ದರು.



