ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಣೇಶ ಮೆರವಣಿಗೆ ವೀಕ್ಷಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ (22), ಆಕಾಶ್ ಜಾಧವ್ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಗಣೇಶ ಮೆರವಣಿಗೆ ಸಂಭ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಮೂವರು ಯುವಕರಿಗೆ ಅಪಘಾತ ದುರಂತ ಅಂತ್ಯ ಕಂಡಿದೆ.



