HomeBengaluru Newsವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

ವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ರಾಷ್ಟ್ರಗೀತೆಯ ಗಾಯನವನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಕೀಲ ಗಿರೀಶ್ ಭಾರದ್ವಾಜ್ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಮೂಲಕ ಮಾಡಲಾಗದ ಕ್ರಮವನ್ನು ಸರ್ಕಾರ ಆದೇಶದ ಮೂಲಕ ಜಾರಿಗೆ ತರಲು ಮುಂದಾಗಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಚಿವ ಸಂಪುಟದ ನಿರ್ಣಯದ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದ್ದು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ವಂದೇ ಮಾತರಂ ಗೀತೆಯು ಮಹತ್ವದ ಪಾತ್ರ ವಹಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗೀತೆಯ ವಾದನ ಅಥವಾ ಗಾಯನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img