HomeIndia NewsUPI ಬಳಕೆದಾರರಿಗೆ ಹೊಸ ಶುಲ್ಕ? ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ!

UPI ಬಳಕೆದಾರರಿಗೆ ಹೊಸ ಶುಲ್ಕ? ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ!

For Dai;y Updates Join Our whatsapp Group

ನವದೆಹಲಿ: ಯುಪಿಐ ವಹಿವಾಟುಗಳ ಮೇಲಿನ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ನಿಯಮದ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಅಮೆರಿಕದ ಒತ್ತಡಕ್ಕೆ ಮಣಿದು ಭಾರತೀಯರ ಮೇಲೆ ಯುಪಿಐ ಶುಲ್ಕದ ಹೊರೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಈ ಹೊಸ ಶುಲ್ಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೇಳಿಕೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮುಂದೆ ಶರಣಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವುದರಿಂದ ಭಾರತೀಯರ ಜೇಬಿಗೆ ಹೊರೆ ಬೀಳಲಿದೆ. ದೊಡ್ಡ ಮೊತ್ತದ ಯುಪಿಐ ಪಾವತಿಗಳ ಮೇಲಿನ ಹೊಸ MDR ನಿಯಮವನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ಆದರೆ, ರಾಹುಲ್ ಗಾಂಧಿ ಅವರ ಆರೋಪವನ್ನು ಕೇಂದ್ರ ಹಣಕಾಸು ಸಚಿವಾಲಯ ತಳ್ಳಿಹಾಕಿದ್ದು, ಯುಪಿಐ ಮೇಲಿನ MDR ನಿರ್ಧಾರದಲ್ಲಿ ಯಾವುದೇ ವಿದೇಶಿ ಪ್ರಭಾವವಿಲ್ಲ ಎಂದು ಸ್ಪಷ್ಟಪಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img