ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೃತದೇಹ ಹೊರವಲಯದ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕೆಎಸ್ಆರ್ಪಿ 3ನೇ ಬೆಟಾಲಿಯನ್ನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ನವೀನ್, ಸದ್ಯ ಬೆಂಗಳೂರು ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನವೀನ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



