HomeKarnataka Newsಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

For Dai;y Updates Join Our whatsapp Group

ಮಂಡ್ಯ: ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸುತ್ತಿದೆ.

ಹೇಮಾವತಿ ಜಲಾಶಯದಿಂದ ಕೆಆರ್‌ಎಸ್‌ಗೆ ನೀರು ಹರಿಸಿರುವುದರಿಂದ ಜಲಾಶಯದ ಒಳಹರಿವು ಹೆಚ್ಚಾಗಿದೆ.

ಹೇಮಾವತಿಯಿಂದ ನೀರು ಹರಿಸಿರುವ ಪರಿಣಾಮ ಕೆಆರ್‌ಎಸ್‌ನ ಒಳಹರಿವು 4,457 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸದ್ಯ ಕೆಆರ್‌ಎಸ್‌ನಿಂದ ತಮಿಳುನಾಡಿನತ್ತ 6,634 ಕ್ಯೂಸೆಕ್ ನೀರು ಹೊರಹರಿವಿನ ರೂಪದಲ್ಲಿ ಹೋಗುತ್ತಿದೆ.

ಸೆಪ್ಟೆಂಬರ್ 9ರಂದು 15 ದಿನಗಳ ಕಾಲ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿತ್ತು. ಈ ವೇಳೆ ರಾಜ್ಯ ಸರ್ಕಾರ ನೀರು ಬಿಡುವುದಿಲ್ಲ ಹಾಗೂ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಾಗಿ ಹೇಳಿತ್ತು. ಆದರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ವಿಚಾರಣೆಗೆ ಬಂದಿಲ್ಲ. ಈ ನಡುವೆ ಒಂದೆರಡು ದಿನ ಹೊರತುಪಡಿಸಿ ನಿತ್ಯವೂ ತಮಿಳುನಾಡಿಗೆ ನೀರು ಹರಿಯುತ್ತಿದೆ.

ಇದೇ ರೀತಿಯಲ್ಲಿ ನೀರು ಬಿಡುಗಡೆ ಮುಂದುವರಿದರೆ ಕೆಆರ್‌ಎಸ್ ಮಾತ್ರವಲ್ಲದೆ ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ 105.86 ಅಡಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ ಪ್ರಸ್ತುತ 27.761 ಟಿಎಂಸಿ ನೀರು ಸಂಗ್ರಹವಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img