ಬೀದರ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಮಾಣಿಕಪ್ಪ ಶೇರಿಕಾರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೀದರ್ ನಗರದ ಹಕ್ಕಾ ಕಾಲೋನಿಯಲ್ಲಿರುವ ಮಾಣಿಕಪ್ಪ ಶೇರಿಕಾರ ಅವರ ನಿವಾಸದ ಮೇಲೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ಹಾಗೂ ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಅಧಿಕಾರದಲ್ಲಿದ್ದಾಗ ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.



