HomeKarnataka Newsವಂದೇ ಮಾತರಂ ಅರ್ಧಕ್ಕೆ ಮೊಟಕು ವಿಚಾರ: ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಗೆಹ್ಲೋಟ್ ಪತ್ರ

ವಂದೇ ಮಾತರಂ ಅರ್ಧಕ್ಕೆ ಮೊಟಕು ವಿಚಾರ: ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಗೆಹ್ಲೋಟ್ ಪತ್ರ

For Dai;y Updates Join Our whatsapp Group

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ರಾಜ್ಯ ಸರ್ಕಾರದ ಈ ನಿರ್ಧಾರವು ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಸೂತ್ರಗಳು ಹಾಗೂ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ, 2026’ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಸಂವಿಧಾನದ ವಿಧಿ 162, 256 ಮತ್ತು 257(1)ರ ಅನ್ವಯ ರಾಜ್ಯ ಸರ್ಕಾರಗಳು ಕೇಂದ್ರದ ನಿಯಮಾವಳಿಗಳನ್ನು ಪಾಲಿಸಬೇಕಾಗುತ್ತದೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಸಂಕೇತಗಳ ವಿಚಾರದಲ್ಲಿ ಏಕರೂಪತೆ ಹಾಗೂ ಗೌರವವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದರಿಂದ ಸಂವಿಧಾನಾತ್ಮಕ ಪ್ರಶ್ನೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸಂಕೇತಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಅನಗತ್ಯ ಕಾನೂನು ತೊಡಕುಗಳನ್ನು ತಪ್ಪಿಸಲು ಕೇಂದ್ರ ಸರ್ಕಾರದ ಪ್ರಸ್ತುತ ನೀತಿ ಹಾಗೂ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿರುವುದು ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಗಮನ ಸೆಳೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img